ಮಂಗಳೂರು: ತಾರವಾಡು ಧರ್ಮ ನೇಮೋತ್ಸವ ನಿಗದಿತ ವೇಳಾ ಪಟ್ಟಿಯಂತೆ ನಡೆಸಲಾಗುವುದು: ನಳಿನ್ ಕುಮಾರ್ ಕಟೀಲ್

ಮಂಗಳೂರು: ದ.ಕ ಜಿಲ್ಲೆಯ ಕಡಬ ತಾಲೂಕಿನ ಕೆಲಜಿನಾ ಕುಂಜಡಿ ತಾರವಾಡು ಗ್ರಾಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಧರ್ಮ ನೇಮೋತ್ಸವ ಕಾರ್ಯಕ್ರಮವು ನಿಗದಿತ ವೇಳಾ ಪಟ್ಟಿಯಂತೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೋವಿಡ್ ಮಾರ್ಗ ಸೂಚಿಗಳನ್ನು ಅನುಸರಿಸಿಕೊಂಡು ಏ.8 ಮತ್ತು 9 ರಂದು ಧರ್ಮ ನೇಮೋತ್ಸವ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮವು ‘ಅನಿವಾರ್ಯ’ ಮತ್ತು ಅದನ್ನು ರದ್ದು ಮಾಡಲಾಗುವುದಿಲ್ಲ. ಇದು ಧರ್ಮ ನಿಯಮವಾಗಿದ್ದು ನಾವು ಅದನ್ನು ಮಾಡಲೇ ಬೇಕಗುತ್ತದೆ ಎಂದರು.
   ಪುರೋಹಿತರ ನಿರ್ದೇಶನದ ಮೇರೆಗೆ ಕಾರ್ಯಕ್ರಮದ ದಿನಾಂಕವನ್ನು ನಿಗದಿ ಪಡಿಸಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ 4 ದಿನಗಳ ಕಾರ್ಯಕ್ರಮವನ್ನು 2 ದಿನಗಳಿಗೆ ಕಡಿತ ಗೊಳಿಸಿ ನಡೆಸಲಾಗುತ್ತಿದೆ. ಅಲ್ಲದೆ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಕುಟುಂಬ ಸಂಪ್ರದಾಯದ ಪ್ರಕಾರ ಈ ಕಾರ್ಯಕ್ರಮ 12 ವರ್ಷಗಳಿಗೊಮ್ಮೆ ನಡೆಯುತ್ತದೆ ಆದರೆ ಹಲವಾರು ಅನಿವಾರ್ಯ ಕಾರಣಗಳಿಂದ ಕಳೆದ 60 ವರ್ಷಗಳಿಂದ ಕಾರ್ಯಕ್ರಮ ನಡೆದಿಲ್ಲ ಎಂದರು
 ಈ ಕಾರ್ಯಕ್ರಮದಲ್ಲಿ ಯಾವುದೇ ಬೃಹತ್ ಸಭೆ ನಡೆಯುವುದಿಲ್ಲ. ಅಲ್ಲದೆ ಕಾರ್ಯಕ್ರಮದಲ್ಲಿ 500 ಕ್ಕಿಂತ ಹೆಚ್ಚು ಜನರು ಸೇರದಂತೆ ನೋಡಿಕೊಳ್ಳಲಾಗುತ್ತದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 4 ಕಡೆಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಿದ್ದು, ಮಾಸ್ಕ್ ಧರಿಸದೇ ಕಾರ್ಯಕ್ರಮಕ್ಕೆ ಬರುವವರಿಗೆ ಮಾಸ್ಕ್ ವಿತರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.
ಇನ್ನು ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಅವರ ಬರುವಿಕೆ ಇನ್ನೂ ಖಚಿತಗೊಂಡಿಲ್ಲ ಎಂದ ಅವರು, ಕಾರ್ಯಕ್ರಮದಲ್ಲಿ 8,000 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!