ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಜಿಲ್ಲಾ ಕಚೇರಿ ಉದ್ಘಾಟನೆ

ಉಡುಪಿ (ಉಡುಪಿ ಟೈಮ್ಸ್ ವರದಿ): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಆದಿ ಉಡುಪಿಯ ರೀಗಲ್ ನೆಕ್ಸ್ಟ್ ಕಟ್ಟಡದಲ್ಲಿ ನಡೆಯಿತು. ಕಚೇರಿಯನ್ನು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನಂತಹ ತ್ಯಾಗಜೀವಿಗಳ ಸ್ಮರಣೆಯಿಂದ ಯುವಜನರಲ್ಲಿ ದೇಶಪ್ರೇಮ ಜಾಗೃತವಾಗಲು ಸಾಧ್ಯವಾಗುತ್ತದೆ. ಉಪಕಾರ ಮಾಡಿದರಿಗೆ ಪ್ರತ್ಯುಪಕಾರ ಮಾಡದಿದ್ದರೆ ನಾವು ಅಪರಾಧಿಗಳಾಗುತ್ತೇವೆ. ಇದು ಜನ್ಮಾಂತರದಲ್ಲೂ ಕಷ್ಟಕ್ಕೆ ನಾಂದಿಯಾಗುತ್ತದೆ. ದೇಶದಲ್ಲಿ ಕ್ಷೋಭೆಗೂ ಕಾರಣವಾಗುತ್ತದೆ ಎಂದು ಹೇಳಿದರು.


ಈ ವೇಳೆ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ , ನಗರಸಭಾ ಅಧ್ಯಕ್ಷೆ ಸುಮಿತ್ರ ನಾಯಕ್ ಮಾತಾಡಿ, ರಾಯಣ್ಣ ಅಭಿಮಾನಿ ಬಳಗ ನೀಡಿದ ಮನವಿಯನ್ನು ಅನುಮೋದನೆಗಾಗಿ ಮುಂದಿನ ಸಭೆಯಲ್ಲಿಟ್ಟು ಯಾವುದಾದರು ರಸ್ತೆಗೆ ಅಥವಾ ಸರ್ಕಲ್ ಗೆ ಸಂಗೊಳ್ಳಿ ರಾಯಣ್ಣ ಹೆಸರನ್ನು ಇಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು. ಇದೇ ವೇಳೆ, ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ದೇಶಪ್ರೇಮಿಗಳ ಈ ಸಂಘಟನೆಯೊಂದಿಗೆ ನಾವು ಯಾವತ್ತೂ ಇರುತ್ತೇವೆ ಎಂದು ಭರವಸೆ ನೀಡಿದರು.


ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕ ಇದರ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಬ, ಮೀನುಗಾರ ಮುಖಂಡ ಯಶ್ ಪಾಲ್ ಸುವರ್ಣ, ಸುಮನಸಾ ಅಧ್ಯಕ್ಷ ಪ್ರಕಾಶ್ ಕೊಡವೂರು, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಹಾಲುಮತ ಮಹಾಸಭಾ ಅಧ್ಯಕ್ಷ ಸಿದ್ದಪ್ಪ ಎಚ್. ಐಹೊಳೆ, ಕನಕದಾಸ ಸಮಾಜ ಸೇವಾ ಸಂಘ ಅಧ್ಯಕ್ಷ ಹನುಮಂತ ಐಹೊಳೆ, ಜನಾರ್ದನ್ ಕೊಡವೂರು, ಸವಿತಾ ನೋಟಗಾರ, ಪೂರ್ಣಿಮಾ ಜನಾರ್ದನ್, ಲಕ್ಷ್ಮಣ್, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!