ಮೈಸೂರು: ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರಿಗೆ ನಿರ್ಬಂಧ ಪ್ರಮೋದಾ ದೇವಿ ಒಡೆಯರ್
ಮೈಸೂರು(ಉಡುಪಿ ಟೈಮ್ಸ್ ವರದಿ): ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಈ ಬಾರಿ ಶರನ್ನವರಾತ್ರಿಗೆ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಿದ್ದು. ಅರಮನೆಯ ದರ್ಬಾರ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿದೆ, ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ಬಾರಿ ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿಗೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಪ್ರವೇಶವನ್ನು ನಿಷೇಧಿಸಿದ್ದು, ಸಾಂಪ್ರದಾಯಿಕವಾಗಿ ಮಾತ್ರ ಹಬ್ಬ ಆಚರಣೆ ಮಾಡಲಾಗುವುದು ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದರು.