ನೇಣು ಬಿಗಿದು ಯುವತಿ ಆತ್ಮಹತ್ಯೆ

ಕಡಬ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಇಂದು (ಏ.5) ನಡೆದಿದೆ. ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಪುಷ್ಪಲತಾ ಯಾನೆ ದೀಕ್ಷಾ (25) ಆತ್ಮಹತ್ಯೆ ಮಾಡಿಕೊಂಡವರು.

ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುಷ್ಪಲತಾ ತಮ್ಮ ಮನೆ ಸಮೀಪ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!