ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ
ಕಾರ್ಕಳ( ಉಡುಪಿ ಟೈಮ್ಸ್ ವರದಿ): ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀರಾಲು ಎಂಬಲ್ಲಿ ನಡೆದಿದೆ. ವಿಜಯ ಕುಮಾರ್ ಜೈನ್ (62) ರಕ್ಷಿಸಲ್ಪಟ್ಟ ವ್ಯಕ್ತಿ.
ಇವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಕೂಡಲೇ ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂಧಿಗಳು ವ್ಯಕ್ತಿಯನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ವ್ಯಕ್ತಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಮ್ ಸಂಜೀವ , ದಪೆದಾರ್ ರೂಪೇಶ್, ಸಿಬ್ಬಂದಿಗಳಾದ ಜಯ ಮೂಲ್ಯ, ಮನೋಹರ್ ಪ್ರಸಾದ್, ಮಹಮ್ಮದ ರಫೀಕ್, ಶಿವಯ್ಯ ಮಠಪತಿ ಭಾಗವಹಿಸಿದ್ದರು.