ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ, ಗಾಬರಿಗೊಂಡ ಸ್ಥಳೀಯರು
ಮಂಗಳೂರು(ಉಡುಪಿ ಟೈಮ್ಸ್ ವರದಿ): ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹಿಸಲಾದ ತ್ಯಾಜ್ಯವನ್ನು ಸಂಸ್ಕರಣೆ ಮಾಡುವ ಪಚ್ಚನಾಡಿಯ ಘಟಕದಲ್ಲಿ ಏ.4 ರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ 9 ರ ಸುಮಾರಿಗೆ ಘಟಕದಲ್ಲಿ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಉಂಟಾದ ಪರಿಣಾಮ ಸುತ್ತಮುತ್ತ ಮನೆಯೊಳಗೆ ಹೊಗೆ ಅವರಿಸಿ ಜನ ಪರದಾಡುವಂತಾಗಿತ್ತು. ತಕ್ಷಣ ಸ್ಥಳೀಯರು ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್ ನಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸ್ಥಳೀಯ ಮನಪಾ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.