ಮಹಾರಾಷ್ಟ್ರ: 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಠಾಕ್ರೆ ಮನವಿ

ಮುಂಬೈ : ಮಹಾರಾಷ್ಟ್ರದಲ್ಲಿ ಈಗಾಗಲೇ ಸೋಂಕು ಮಿತಿ ಮೀರಿ ಬೆಳೆಯುತ್ತಿದೆ. ಇದರ ನಡುವೆ ಮತ್ತೊಂದು ಆತಂಕಕಾರಿ ಸುದ್ದಿಯೊಂದು ವರದಿಯಾಗಿದ್ದು, ಮಕ್ಕಳು ಮತ್ತು ಯುವಕರಲ್ಲೇ ಅತಿಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.


ಇದೀಗ ಇಡೀ ರಾಜ್ಯದಲ್ಲಿ ಹೊಸ ಆತಂಕ ಸೃಷ್ಟಿಸಿದ್ದು, ಈ ಹಿನ್ನೆಲೆ ಹೆಚ್ಚುವರಿ ಲಸಿಕೆ ನೀಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.


ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಚರ್ಚೆಯಲ್ಲಿ ಕೊವಿಡ್-19 ಸೋಂಕಿನಿಂದ ಎದುರಾದ ಭೀತಿ ಬಗ್ಗೆ ಪ್ರಧಾನಿಯವರಿಗೆ ಸಿಎಂ ಉದ್ಧವ್ ಠಾಕ್ರೆ ವಿವಿರ ನೀಡಿದ್ದು, ರಾಜ್ಯದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾವೈರಸ್ ಲಸಿಕೆ ನೀಡುವುದಕ್ಕೆ ಅನುಮತಿ ನೀಡಬೇಕು. ಇದರ ಜೊತೆಗೆ ಆರು ಜಿಲ್ಲೆಗಳಿಗೆ ಹೆಚ್ಚುವರಿಯಾಗಿ 1.5 ಕೋಟಿ ಕೊವಿಡ್-19 ಲಸಿಕೆಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡು.


ಮಹಾರಾಷ್ಟ್ರದಲ್ಲಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಮೂರು ತಿಂಗಳಿನಲ್ಲಿ 88,827 ಮಕ್ಕಳಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ಈ ಮದ್ಯೆ 40 ವರ್ಷದೊಳಗಿನ ಸೋಂಕಿತರ ಸಂಖ್ಯೆಯಲ್ಲಿ ಶೇ.48ರಷ್ಟು ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 47288 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ 155 ಮಂದಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದು, 26,252 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಟ್ಟು 30,57,885 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,49,075 ಸೋಂಕಿತರು ಗುಣಮುಖರಾಗಿದ್ದು, 56,033 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,51,375 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!