ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ಯು ಟಿ ಖಾದರ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾತ್ರಿ ಮನೆಯಲ್ಲಿರಲು ಹೆದರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ನೈತಿಕ ಪೋಲಿಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸರು ಕ್ರಮ ಕೈಗೊಂಡರೇ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ ಎಂದರು.
ಇದೇ ವೇಳೆ ಮಾತು ಮುಂದುವರೆಸಿದ ಅವರು, ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಬೇಕು, ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು ಆದರೆ, ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದಿದ್ದಾರೆ.