ಶಿರ್ವಾ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಶಿರ್ವ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾ ಗ್ರಾಮದ ಕೋಡು ಮೂಡುಮನೆಯಲ್ಲಿ ನಡೆದಿದೆ. ಅಶೋಕ ಸಫಲಿಗ(37) ಆತ್ಮಹತ್ಯೆ ಮಾಡಿಕೊಂಡವರು. ಇವರು ಅವಿವಾಹಿತರಾಗಿದ್ದು ಕಳೆದ 8 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗಿರುವುದಿಲ್ಲ.

ಇದೇ ವೇದನೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಹಾಗೂ ಮದುವೆಯಾಗದೇ ಇದ್ದುದರಿಂದಲೂ ಮನನೊಂದು ಏ.6 ರಂದು ಮನೆಯ ಶೌಚಾಲಯದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!