ಸಾರಿಗೆ ಮುಷ್ಕರ ಹಿನ್ನೆಲೆ ಮಂಗಳೂರು ವಿ.ವಿಯ ಪದವಿ ಪರೀಕ್ಷೆಗಳು ಮುಂದೂಡುವಿಕೆ

ಮಂಗಳೂರು(ಉಡುಪಿ ಟೈಮ್ಸ್ ವರದಿ): ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಏಪ್ರಿಲ್ 12 ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವುದರಿಂದ ವಿ.ವಿ ಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಪರೀಕ್ಷಾಂಗ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು, ಮುಂದೂಡಿದ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಶೀಘ್ರದಲ್ಲಿಯೇ ತಿಳಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!