ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದ ಮತ್ತೋರ್ವ ಬಾಲಕ ಸಾವು
ಮಂಗಳೂರು, ಎ.22 (ಉಡುಪಿ ಟೈಮ್ಸ್ ವರದಿ) : ಮನೆಯಲ್ಲಿ ಆಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ. ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಮೃತಪಟ್ಟ ಬಾಲಕ.
ಎ.20 ರಂದು ಹಳೆಯಂಗಡಿ ಇಂದಿರಾನಗರ ಬಳಿ ಸಂಜೆ ಆಟವಾಡುತ್ತಿದ್ದ ಸಂದರ್ಭ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿತ್ತು. ಪರಿಣಾಮ ನಿಹಾನ್ ಹಾಗೂ ಮಾರುತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎ. 21ರ ಬೆಳಗ್ಗೆ ಮೃತಪಟ್ಟಿದ್ದು, ಇಂದು ಬೆಳಿಗ್ಗೆ ಇನ್ನೋರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.