ಬೈಂದೂರು: ಮಹಿಳೆ ಮೃತ್ಯು

ಬೈಂದೂರು ಜ.29(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ದೇವಿ (57) ಮೃತಪಟ್ಟವರು. ಇವರು 20 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆ ಕೊಡಿಸಿದರೂ ಗುಣಮುಖವಾಗಿರಲಿಲ್ಲ. ನಿನ್ನೆ ಬೆಳಿಗ್ಗೆ ಮನೆಯಲ್ಲಿ ತೀರ್ವ ಅಸ್ವಸ್ಥಗೊಂಡಿದ್ದ ದೇವಿ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಮಗ ಭಾಸ್ಕರ ಅವರು ನೀಡಿದ ಮಾಹಿತಿಯಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!