ಉಡುಪಿ: ವ್ಯಕ್ತಿ ಆತ್ಮಹತ್ಯೆ
ಉಡುಪಿ ಜ.30(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪುತ್ತೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಶಂಕರ (65) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ನಿನ್ನೆ ಸಂಜೆ ವೇಳೆ ಮನೆಯ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.