ಬ್ರಹ್ಮಾವರ : ವ್ಯಕ್ತಿ ನಾಪತ್ತೆ

ಬ್ರಹ್ಮಾವರ, ಫೆ.01 (ಉಡುಪಿ ಟೈಮ್ಸ್ ವರದಿ): ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಶರತ್ ರಾವ್ (39) ನಾಪತ್ತೆಯಾಗಿರುವವರು. ಇವರು ಜನವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಇವರು 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!