ಬೆಳ್ಳಂಪಳ್ಳಿ: ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಉಡುಪಿ ಫೆ.1 (ಉಡುಪಿ ಟೈಮ್ಸ್ ವರದಿ): ಶೂನ್ಯ ಶಿಕ್ಷಕರ ಶಾಲೆಯಾಗಿರುವ ಕಾಪುವಿನ ಬೆಳ್ಳಂಪಳ್ಳಿಯ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಇಂದು ವಿದ್ಯಾರ್ಥಿಗಳು ಶಾಲೆಯ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಶಾಲೆಗೆ ಯಾವುದೇ ಖಾಯಂ ಶಿಕ್ಷಕರು ಇಲ್ಲದ ಕಾರಣ ವಿದ್ಯಾರ್ಜನೆಗೆ ತೊಡಕುಂಟಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು, ಪೋಷಕರು, ಹಳೇ ವಿದ್ಯಾರ್ಥಿಗಳು ಹಾಗೂ ಇತರ ಸಾರ್ವಜನಿಕರು ಸೇರಿ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಗೆ ಮಾಡಲು ನಿಲ್ದಾಣ ನಿರ್ಧರಿಸಿದ್ದಾರೆ. ಈಗಾಗಲೇ ಸ್ಥಳಕ್ಕೆ ಬಿಇಒ ಆಗಮಿಸಿ ಮಾತನಾಡಿದ್ದು, ಪ್ರತಿಭಟನಾ ನಿರತರು ಸ್ಥಳಕ್ಕೆ ಡಿಡಿಪಿಐ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ.
1947 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಲೆ ಕಳೆದ ಹಲವು ವರ್ಷಗಳಿಂದ ಖಾಯಂ ಶಿಕ್ಷಕರನ್ನೇ ಕಂಡಿಲ್ಲ. ಶಾಲೆಯ ಶಾಲೆಗೆ ಕಾಯಂ ಶಿಕ್ಷಕರನ್ನ ನೀಡುವ ನೀಡುವಂತೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. ಕಳೆದ ಆರು ವರ್ಷದಿಂದ ವಾರಕ್ಕೆ ಓರ್ವ ಶಿಕ್ಷಕರು ಮಾತ್ರ ಈ ಶಾಲೆಯ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ತೊಡಕುಂಟಾಗಿದೆ ಹಾಗೂ ಈ ಬಗ್ಗೆ ಸಂಬಂಧ ಪಟ್ಟ ಶಿಕ್ಷಣ ಇಲಾಖೆಯ ವಿಭಾಗಗಳಿಗೆ ಮಾಹಿತಿ ನೀಡಿದರು.
ಇಲ್ಲಿಯವರೆಗೆ ಯಾವುದೇ ಕಾಯಂ ಶಿಕ್ಷಕರು ನಿಯೋಜನೆ ಗೊಂಡಿಲ್ಲ. 15 ದಿನಗಳ ಹಿಂದೆ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾವಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಏಕೈಕ ಮುಖ್ಯೋಪಾಧ್ಯಾಯರ ನ್ನು ನಿಯೋಜನೆ ಮಾಡಿದ್ದು, ಬಿ ಇ ಓ ಅವರ ಈ ಶಿಕ್ಷರನ್ನು ಮಾರ್ಪಾಡು ಮಾಡಿ ಸಮೀಪದ ಎಬಿಟಿ ಶಾಲೆಯ ಶಿಕ್ಷಕರಾದ ಅರುಣ್ ಕುಮಾರ್ ಶೆಟ್ಟಿ ಅವರಿಗೆ ವಾರದಲ್ಲಿ ಒಂದು ದಿನ ಯೋಜನೆ ಮಾಡಿ ಆದೇಶ ಮಾಡಿದ್ದಾರೆ.
ಆದರೆ ನೂತನವಾಗಿ ತಾತ್ಕಾಲಿಕ ನೆಲೆಯಲ್ಲಿ ನಿಯೋಜನೆಗೊಂಡಿರುವ ಶಿಕ್ಷಕರು ಶಾಲೆಗೆ ರಿಪೋರ್ಟ್ ಮಾಡಿಕೊಳ್ಳದೆ ಇರುವ ಕಾರಣ ಶಾಲೆಗೆ ಬಂದ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಕಾಯುವಂತಾಗಿದೆ.
ಈ ಶಾಲೆಯಲ್ಲಿ ಒಟ್ಟು 55 ಮಕ್ಕಳು ಕಲಿಯುತ್ತಿದ್ದು ಶಾಲೆಯ ಬೀಗವು ಸಂಚಾಲಕರ ಬಳಿ ಇದೆ. ಆದರೆ ಸಂಚಾಲಕ ರು ಅನಾರೋಗ್ಯದಿಂದ ಇರುವ ಕಾರಣ ಎಲ್ಲಾ ಮಕ್ಕಳು ಶಾಲೆಗೆ ಬಂದರೂ ಕೂಡ ಮಕ್ಕಳಿಗೆ ಬಿಸಿ ಊಟದ ವ್ಯವಸ್ಥೆ ಮಾಡುವುದು ಕಷ್ಟ ಸಾಧ್ಯವಾಗಿದೆ. ಅಲ್ಲದೆ ಈ ಶಾಲೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳಿಗೆ ಸಿಇಟಿ ಅರ್ಜಿ ಸಲ್ಲಿಸಲು ಕೆಲವೇ ದಿನ ಮಾತ್ರ ಉಳಿದಿರುವುದರಿಂದ ಸುಮಾರು 10 ವಿದ್ಯಾರ್ಥಿಗಳಿಗೆ ದೃಢೀಕರಣ ಪತ್ರದ ಪಡೆಯುವುದು ಕಷ್ಟವಾಗುತ್ತಿದೆ. ಹಾಗೂ ಇದಕ್ಕಾಗಿಯೇ ಬೆಳಿಗ್ಗೆ 10 ಗಂಟೆಯಿಂದ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶೀಘ್ರದಲ್ಲಿ ಶಾಲೆಗೆ ಖಾಯಂ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.