ಕಾರ್ಕಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಕಾರ್ಕಳ ಫೆ.2 (ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳದ ಅಮಣ್ಣಿ ರಾಜು ಆತ್ಮಹತ್ಯೆ ಮಾಡಿಕೊಂಡವರು. ಇವರು ಜ.12 ರಂದು ಬೆಳಿಗ್ಗೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಸಂಜೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪತಿ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.