ಕಾರ್ಕಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕಾರ್ಕಳ ಎ.23 ( ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಂತೋಷ್ ಆಚಾರಿ(35) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು 3 ವರ್ಷಗಳಿಂದ ಮಾನಸಿಕ ಖಾಯಿಲೆ ಹಾಗೂ ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದು ಇದಕ್ಕಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.22 ರಂದು ಬೆಳಿಗ್ಗೆ ಮನೆಯ ಬಳಿ ಇರುವ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.