ಕಾರ್ಕಳ: ವ್ಯಕ್ತಿ ಮೃತ್ಯು
ಕಾರ್ಕಳ ಫೆ.5 (ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಠಾಣಾ ವ್ಯಾಪ್ತಿಯ ನಿವಾಸಿ ಬಿ ಸದಾನಂದ (45) ಮೃತಪಟ್ಟವರು. ಚಿನ್ನ ಬೆಳ್ಳಿ ಆಭರಣ ತಯಾರಿಸುವ ಕೆಲಸ ಮಾಡುತ್ತಿದ್ದ ಇವರು ವಾರದ ಹಿಂದೆ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದರು. ಈ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಬಳಿಕ ಅದೇ ದಿನ ರಾತ್ರಿ ಮತ್ತೆ ಅಸ್ವಸ್ಥಗೊಂಡಿದ್ದ ಬಿ ಸದಾನಂದ ಅವರನ್ನು ತಕ್ಷಣ ಕಾರ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಬಿ ಸದಾನಂದ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.