ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಉಡುಪಿ ಫೆ.6(ಉಡುಪಿ ಟೈಮ್ಸ್ ವರದಿ): ಬಿಜೆಪಿ ಜಿಲ್ಲಾ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಸಾಧನೆಗಳು, ರಾಜ್ಯ ಸರಕಾರದ ಆಡಳಿತ ವೈಫಲ್ಯ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕುರಿತು ಸವಿಸ್ತಾರ ಮಾಹಿತಿ ನೀಡಿದರು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ, ಪಕ್ಷದ ಕಾರ್ಯ ಪದ್ಧತಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ಮಾರ್ಗದರ್ಶನ ನೀಡಿದರು.
ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುವ ಅಭಿನಂದನಾ ನಿರ್ಣಯವನ್ನು ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಅವರು ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಮತ್ತು ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಇವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.
ಇದೇ ವೇಳೆ ಪಕ್ಷದ ಹಿರಿಯ ನಾಯಕರಾದ ಸೋಮಶೇಖರ ಭಟ್, ಬಿ.ಸುಧಾಕರ ಶೆಟ್ಟಿ, ಸಂಘದ ಹಿರಿಯರಾದ ಗೋಪಾಲ ಚೆಟ್ಟಿಯಾರ್ ಮಂಗಳೂರು ಹಾಗೂ ಪ್ರೇಮ ಪಡಿಯಾರ್ ಇವರ ನಿಧನದ ಬಗ್ಗೆ ಮೌನ ಪ್ರಾರ್ಥನೆಯೊಂದಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಗಲಿದ ಗಣ್ಯರ ಕುರಿತು ಮಾಹಿತಿ ನೀಡಿದರು. ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಇವರು ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಹಾಗೂ ಬಳಿಕ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರ ಉಪಸ್ಥಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ, ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸಹಿತ ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.