ಬ್ರಹ್ಮಾವರ: ಕೂಲಿ ಕಾರ್ಮಿಕ ಆತ್ಮಹತ್ಯೆ

ಬ್ರಹ್ಮಾವರ ಫೆ.8(ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಠಾಣಾ ವ್ಯಾಪ್ತಿಯ ನಿವಾಸಿ ಶ್ರೀನಿವಾಸ (50) ಮೃತಪಟ್ಟವರು. ಗಾರೆ ಕೆಲಸ ಮಾಡಿಕೊಂಡಿದ್ದ ಅವರು ನಿನ್ನೆ ಬೆಳಿಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಈ ವೇಳೆ ಶ್ರೀನಿವಾಸ ಅವರನ್ನು ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಶ್ರೀನಿವಾಸ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಅಣ್ಣ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!