ಪೆರ್ಡೂರು: ಫೆ.11ರಂದು ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಸಮುದಾಯ ಭವನ ಲೋಕಾರ್ಪಣೆ

ಉಡುಪಿ ಫೆ.8(ಉಡುಪಿ ಟೈಮ್ಸ್ ವರದಿ): ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅತ್ಯಾಕರ್ಷಕ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಸಮುದಾಯ ಭವನ ಫೆ.11 ರಂದು ಬೆಳಿಗ್ಗೆ 10.30ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಪೆರ್ಡೂರು ಮಂಡಲದ ಬಂಟರ ಸಂಘದ ಅಧ್ಯಕ್ಷ ಶಾಂತಾರಾಮ ಸೂಡ ಕೆ. ತಿಳಿಸಿದ್ದಾರೆ.

ಈ ಬಗ್ಗೆ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅತ್ಯಾಕರ್ಷಕ ಒಳಾಂಗಣ ವಿನ್ಯಾಸವನ್ನು ಈ ಭವ್ಯ ಸಮುದಾಯ ಭವನ ಹೊಂಡಿದ್ದು, ಸುಮಾರು 900ಕ್ಕೂ ಅಧಿಕ ಜನ ಕುಳಿತುಕೊಳ್ಳುವ ಆಸನವುಳ್ಳ ಹವಾನಿಯಂತ್ರಿತ ಸಭಾಭವನ ಇದಾಗಿದೆ. ಈ ಸಭಾಭವನದಲ್ಲಿ ವಿಶಾಲವಾದ ವೇದಿಕೆ, ಬೃಹತ್ ಗ್ರೀನ್ ರೂಮ್, ಸಸ್ಯಹಾರ ಮತ್ತು ಮಾಂಸಹಾರಕ್ಕೆ ಪ್ರತ್ಯೇಕ ಅತ್ಯಾಕರ್ಷಕ ಕಿಚನ್ ಹಾಲ್, ಉಳಿದುಕೊಳ್ಳಲು ಯೋಗ್ಯವಾದ ಆಧುನಿಕ ಹವಾನಿಯಂತ್ರಿತ ಅತಿಥಿಗೃಹ, ದಿನದ 24ಗಂಟೆ ಲಿಫ್ಟ್ ಹಾಗೂ ನೀರಿನ ವ್ಯವಸ್ಥೆ, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿಯ ಮುಖ್ಯ ಕಚೇರಿ, ಭದ್ರತಾ ಸಿಬ್ಬಂದಿ ಯೊಂದಿಗೆ ವಿಶಾಲವಾದ ಪಾಕಿರ್ಂಗ್ ವ್ಯವಸ್ಥೆಯನ್ನು ಹೊಂದಿದೆ ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಗ್ರೂಪ್ ಆಫ್ ಹೋಟೆಲ್ ವಿಲೇಪಾರ್ಲೆ ಮುಂಬೈ ಇದರ ಸುಬ್ಬಯ್ಯ ವಿ.ಶೆಟ್ಟಿ, ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಎಂಆರ್‍ಜಿ ಗ್ರೂಪ್ ಬೆಂಗಳೂರು ಇದರ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಬ್ರಹ್ಮಾವರದ ಬಂಟರ ಸಂಘದ ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಂಗಳೂರಿನ ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಕೈಲ್ಕೆರ್ ಭಾಸ್ಕರ್ ಶೆಟ್ಟಿ, ಪಳ್ಳಿ ಪೆಜಕೊಡಂಗೆಯ ಲೀಲಾವತಿ ಎಸ್ ಹೆಗ್ಡೆ, ಪ್ರೇಮಲತ ಸತೀಶ್ಚಂದ್ರ ಹೆಗ್ಡೆ, ಉಡುಪಿಯ ನಿವೃತ್ತ ವೈದ್ಯಾಧಿಕಾರಿ ಡಾ.ಎ ಮನೋರಂಜನ್ ದಾಸ್ ಹೆಗ್ಡೆ, ಮುಂಬೈಯ ಚಾರ್ಟರ್ಡ್ ಎಕೌಂಟೆಂಟ್ ಎನ್.ಬಿ.ಶೆಟ್ಟಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಎಚ್ ಮಂಜುನಾಥ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅದಾನಿ ಗ್ರೂಪ್‍ನ ಅಧ್ಯಕ್ಷ ಕಿಶೋರ್ ಆಳ್ವ, ಸಂತೋಷ್ ರೈಸ್ ಮಿಲ್ ಭದ್ರಾವತಿ ಇದರ ಸುಧಾಕರ ಶೆಟ್ಟಿ, ಬಂಟರ ಸಂಘ ಬೆಂಗಳೂರು ಇದರ ನಿಕಟಪೂರ್ವ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಉಡುಪಿ ತಾಲೂಕು ಸಮಿತಿಯ ಸಂಚಾಲಕ ಶಿವ ಪ್ರಸಾದ್ ಹೆಗ್ಡೆ, ಬೆಂಗಳೂರು ಉದ್ಯಮಿ ದಿನೇಶ್ ಹೆಗ್ಡೆ, ಹಿರಿಯಡ್ಕ ಉದ್ಯಮಿ ಕೆ. ರಾಜರಾಮ ಹೆಗ್ಡೆ, ಉದಯ ಕೃಷ್ಣಯ್ಯ ಶೆಟ್ಟಿ ಚಾಲಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದ ಸಂಘದ ಕೋಶಾಧಿಕಾರಿ ಪ್ರಮೋದ್ ರೈ ಪಳಜೆ, ಉಪಾಧ್ಯಕ್ಷರಾದ ದಿನೇಶ್ಚಂದ್ರ ಶೆಟ್ಟಿ ಬಜ್ಜಾಲು, ಮಹೇಶ್ ಶೆಟ್ಟಿ ಪೈಬೆಟ್ಟು, ರಾಜ ಕುಮಾರ್ ಶೆಟ್ಟಿ ದೊಡ್ಮನೆ, ಶಿವರಾಮ ಶೆಟ್ಟಿ ಬೆಳ್ಳರ್ಪಾಡಿ,ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೆ.ಶೆಟ್ಟಿ ಕುತ್ಯಾರು ಬೀಡು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!