ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಕಾರ್ಕಳಕ್ಕೆ
ಉಡುಪಿ ಫೆ.15(ಉಡುಪಿ ಟೈಮ್ಸ್ ವರದಿ): ಪೊಲೀಸ್ ಮಾಹಿತಿದಾರನ ಅಪಹರಣ, ಹತ್ಯೆ ಪ್ರಕರಣದ ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯನನ್ನು ಪೊಲೀಸರು ಕಾರ್ಕಳ ಕ್ಕೆ ಕರೆ ತಂದಿದ್ದಾರೆ.
2011ರ ಡಿ. 19 ರಂದು ನಡೆದಿದ್ದ ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡ ಅಪಹರಣ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಕರೆತರಲಾಗಿದೆ. ಬಾಡಿ ವಾರೆಂಟ್ ಮೇಲೆ ಈಕೆನನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.
2023ರ ನವೆಂಬರ್ ನಲ್ಲಿ ಶ್ರೀಮತಿಯನ್ನು ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರು ಬಂಧಿಸಿದ್ದರು.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಈಗಾಗಲೇ ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ