ಪತ್ನಿಯಿಂದ “ಕರಿಮಣಿ ಮಾಲಿಕ ನೀನಲ್ಲ” ರೀಲ್ಸ್- ಪತಿ ನೇಣಿಗೆ ಶರಣು
ಹನೂರು ಫೆ.15: ಪತ್ನಿ ಮಾಡಿದ ‘ಕರಿಮಣಿ ಮಾಲೀಕ ನೀನಲ್ಲ’ ವೈರಲ್ ರೀಲ್ಸ್ ಗೆ ಮನನೊಂದು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಆತ್ಮಹತ್ಯೆ ಮಾಡಿಕೊಂಡವರು. ಕುಮಾರ್ ಪತ್ನಿ, ಆಕೆಯ ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಆಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದ್ದು ಪೊಲೀಸರು ತನಿಖೆ ಕೈ ಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ, ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ಹಾಗೂ ಯಶೋಧ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.