ಉಡುಪಿ: ಜಿಲ್ಲೆಯಲ್ಲಿ ಇಂದು(ಎ.24) 403 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ, ಎ.24(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು ಮತ್ತೆ 403 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದೂ ಅಲ್ಲದೆ ಸಕ್ರಿಯ ಪ್ರಕರಣ ಗಳು 1500 ರ ಗಡಿಯಲ್ಲಿದೆ.


ಈ ಪೈಕಿ ಉಡುಪಿ ತಾಲೂಕಿನಲ್ಲೇ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕುಂದಾಪುರ ದಲ್ಲಿ 143, ಕಾರ್ಕಳ ದಲ್ಲಿ 48 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿ ದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 1491 ಕ್ಕೆ ಏರಿಕೆಯಾಗಿದೆ

ಎ.23 ರ ವೇಳೆಗೆ ಜಿಲ್ಲೆಯಲ್ಲಿ, ಒಟ್ಟು 4,84,891 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ
28,442 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 26,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ 194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!