ಗಂಗೊಳ್ಳಿ/ಶಂಕರನಾರಾಯಣ : ಕೋಳಿ ಅಂಕಕ್ಕೆ ದಾಳಿ-6 ಮಂದಿ ವಶ
ಗಂಗೊಳ್ಳಿ/ಶಂಕರನಾರಾಯಣ: ಫೆ.16 (ಉಡುಪಿ ಟೈಮ್ಸ್ ವರದಿ): ಗಂಗೊಳ್ಳಿ ಹಾಗೂ ಶಂಕರ ನಾರಾಯಣ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ, ಹಾಡಿಯಲ್ಲಿ ಕೋಳಿ ಅಂಕದಲ್ಲಿ ನಿರತರಾಗಿದ್ದ ದಿನೇಶ, ಉದಯ , ದೇವೇಂದ್ರ ಎಂಬ ಮೂವರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 8 ಕೋಳಿ, ನಗದು 500 ರೂ. ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಂದೆಡೆ ಶಂಕರನಾರಾಯಣ ಠಾಣಾ ಪೊಲೀಸರು ಕೊಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ, ಶಿವರಾಮ, ಉದಯ, ಸುಧೀರ್ ಎಂಬ ಮೂವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 2 ಕೋಳಿ ಹಾಗೂ 1,500/- ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಈ ಎರಡೂ ಘಟನೆಗೆ ಸಂಬಂಧಿಸಿ ಗಂಗೊಳ್ಳಿ ಹಾಗೂ ಶಂಕರನಾರಾಯಣ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.