ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕ ಬಜೆಟ್: ಕೃಷ್ಣಮೂರ್ತಿ ಆಚಾರ್ಯ

ಕೃಷ್ಣಮೂರ್ತಿ ಆಚಾರ್ಯ

ಉಡುಪಿ ಫೆ.16(ಉಡುಪಿ ಟೈಮ್ಸ್ ವದರಿ): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಹೇಳಿದ್ದಾರೆ.

ಬಡ ಮಧ್ಯಮ ವರ್ಗದ ಜನರ ಮೇಲೆ ಅತೀವವಾದ ಕಾಳಜಿಯಿಂದ ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು ಶ್ಲಾಘನೀಯ ಎಂದಿದ್ದಾರೆ.

ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್ ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಣೆ:

ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000ರೂ.ಗಳಿಗೆ ಹೆಚ್ಚಿಸಲಾಗಿದೆ. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. 2024-25ನೇ ಸಾಲಿನಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದು ಘೋಷಿಸಿರುವುದು ಮೀನುಗಾರರಿಗೆ ಆಶಾದಾಯಕವಾಗಿದೆ ಎಂದರು.

ಯಾವುದೇ ಆದಾಯವಿಲ್ಲದ 34,165 `ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ ಗಿisioಟಿ ಉಡಿouಠಿ ರಚನೆ. ಇನಾಂ/ ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ಸಿ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ನಿರ್ಧರಿಸಿರುವುದು ಅಭಿನಂದನೀಯ ಎಂದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವುದು. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ – ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸುವುದು ಎಂದು ಹೇಳಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಒಟ್ಟಾರೆ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರೈತ ಪರ, ಕೃಷಿ ವಲಯ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ, ಬಂಡವಾಳ ಹೂಡಿಕೆ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಬಹುಕಾಲ ಇರುವುದಿಲ್ಲ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿಗರಿಗೆ ನಮ್ಮ ಸರಕಾರದ ಅಭಿವೃದ್ಧಿ ಪರ ಬಜೆಟ್ ನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರಕಾರದ ರಾಜ್ಯ ಪಾಲಿನ ತೆರಿಗೆ ಹಣ ಕೊಡದೆ ಅನ್ಯಾಯವೆಸಗುತ್ತಿರುವುದನ್ನೆಲ್ಲ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದ ರಾಜ್ಯ ಬಿಜೆಪಿ ನಾಯಕರು ಇಲ್ಲದ ನಾಟಕವಾಡಲು ಇಳಿದಿದ್ದು ಮುಂದೆ ಮತದಾರ ಇವರಿಗೆ ತಕ್ಕ ಪಾಠ ಕಲಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೃಷ್ಣಮೂರ್ತಿ ಆಚಾರ್ಯ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!