ಶಿರ್ವ: ಸಿಗರೇಟ್ನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ವ್ಯಕ್ತಿ ವಶ
ಶಿರ್ವಾ ಫೆ.16(ಉಡುಪಿ ಟೈಮ್ಸ್ ವರದಿ):ಗಾಂಜಾವನ್ನು ಸಿಗರೇಟ್ನಲ್ಲಿ ಸೇರಿಸಿ ಸೇದುತ್ತಿದ್ದ ವ್ಯಕ್ತಿಯನ್ನು ಶಿರ್ವ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾದಕ ವಸ್ತು ಗಾಂಜಾವನ್ನು ಸಿಗರೇಟ್ನಲ್ಲಿ ಸೇರಿಸಿ ಸೇದುತ್ತಿದ್ದ ವಿಜೇಶ್ (33) ಎಂಬಾತನನ್ನು ಶಿರ್ವ ಠಾಣಾ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು, ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿರುವ ಕಾರಣ ಈತನ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.