ಜೆರೋಸಾ ಶಾಲೆ ಪ್ರಕರಣ: ತನಿಖಾಧಿಕಾರಿಗೆ ವಿದ್ಯಾರ್ಥಿಗಳು, ಪೋಷಕರ ಲಿಖಿತ ಹೇಳಿಕೆ ಸಲ್ಲಿಕೆ
ಮಂಗಳೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮನಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಾರಂಬಿಸಿರುವ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್.ಎಸ್ ಅವರು ದಕ್ಷಿಣ ಕನ್ನಡ ಡಿಡಿಪಿಐ ವೆಂಕಟೇಶ ಸುಬ್ರಾಯ ಪಟಗಾರ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಹಾಗೂ ಪ್ರಕರಣದಲ್ಲಿರುವ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮಕ್ಕಳು ಹಾಗೂ ಪೋಷಕರ ಲಿಖಿತ ಹೇಳಿಕೆಗಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖಾಧಿಕಾರಿಯವರಿಗೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತನಿಖೆ ಬಗ್ಗೆ ಮಾತನಾಡಿದ ತನಿಖಾಧಿಕಾರಿ ಡಾ.ಆಕಾಶ್.ಎಸ್ ಅವರು, ಈ ಪ್ರಕರಣದ ಕುರಿತು ಸತ್ಯಾನೇಶ್ವನೆಗೆ, ತನಿಖೆ ಮಾಡೋದಕ್ಕೆ ಬಂದಿದ್ದೇನೆ. ತನಿಖೆ ಪ್ರಗತಿಯಲ್ಲಿದೆ. ಹಂತ ಹಂತವಾಗಿ ತನಿಖೆ ನಡೆಸುತ್ತೇನೆ. ನಮ್ಮ ಅಧಿಕಾರಿಗಳಿಂದಲೂ ಪ್ರಾಥಮಿಕ ಮಾಹಿತಿ ಪಡೆದಿದ್ದೇನೆ. ಇನ್ನು ಹೆಚ್ಚಿನ ದಾಖಲೆ, ಮಾಹಿತಿ ಪಡೆಯಬೇಕಿದೆ. ಇದಕ್ಕೆ ಬೇಕಾದ ಪ್ಲ್ಯಾನ್ ಮಾಡಿಕೊಂಡಿದ್ದೇನೆ ಎಂದರು.
ಹಾಗೂ ಈ ಹಂತದಲ್ಲಿ ವಿಚಾರಣೆ ಕುರಿತು ಏನೂ ಹೇಳಲ್ಲ. ಆದಷ್ಟು ಬೇಗ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಬೇಕಿದೆ. ನಿರಂತರವಾಗಿ ವಿಚಾರಣೆ ನಡೆಯುತ್ತಿತ್ತು. ಎರಡು ದಿನ ಇಲ್ಲೇ ಇದ್ದು ತನಿಖೆ ಮುಂದುವರೆಸುತ್ತೇನೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಹಾಕಿ ನಿಷ್ಠೆಯಿಂದ ವಿಚಾರಣೆ ನಡೆಸಿ ಸರಿಯಾದ ವರದಿ ಸಲ್ಲಿಸುತ್ತೇನೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀರಾಮನಿಗೆ ಅವಹೇಳನ ಮಾಡಿದ್ದಾರೆ ಎಂಬ ಆರೋಪದ ವಿಚಾರವಾಗಿ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದು, ತನಿಖಾಧಿಕಾರಿಯಾಗಿ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್.ಎಸ್ ಅವರನ್ನು ನೇಮಿಸಲಾಗಿತ್ತು. ಅದರಂತೆ, ಇಂದಿನಿಂದ ಆಕಾಶ್ ಅವರು ತನಿಖೆಯನ್ನು ಆರಂಭಿಸಿದ್ದು, ಘಟನೆ ಬಗ್ಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ವೆಂಕಟೇಶ ಸುಬ್ರಾಯ ಪಟಗಾರ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
Shame to people who oppose good education take your tc and go out