ಬಜರಂಗದಳದ ವಿರುದ್ಧವೂ ಗೂಂಡಾ ಕಾಯ್ದೆ ಹಾಕಿದ್ದೆ ಆರ್. ಅಶೋಕ್ ಹೇಳಿಕೆ- ವ್ಯಾಪಕ ಆಕ್ರೋಶ

ಮಂಗಳೂರು: ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮ ನಿಂದನೆ ,ಆ ಬಳಿಕ ಪ್ರತಿಭಟಿಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾದ ವಿಚಾರದ ಕುರಿತು ಸದನದಲ್ಲಿ ಕಾವೇರಿದ ಚರ್ಚೆಯ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ನೀಡಿದ ಹೇಳಿಕೆ ವಿರುದ್ಧ ಬಜರಂಗದಳ ಆಕ್ರೋಶ ಹೊರ ಹಾಕಿದೆ.

ಸದನದಲ್ಲಿ ಮಾತನಾಡುತ್ತಿದ್ದ ವೇಳೆ ಮಂಗಳೂರಿನ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಹೇಳಿಕೆ ನೀಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

”ನಾನು ಗೃಹ ಸಚಿವನಾಗಿದ್ದ ವೇಳೆ ನನ್ನ ಮೇಲೂ ಒತ್ತಡವಿತ್ತು, ನಾನು ಹಿಂದೆ ಮುಂದೆ ನೋಡಲಿಲ್ಲ. ಅವರೆಲ್ಲರ ಮೇಲೆ ಗೂಂಡಾ ಕಾಯ್ದೆ ಹಾಕಿದೆ. ಆ ತರ ನೀವು ನಿಲುವು ತೆಗೆದುಕೊಳ್ಳಬೇಕು” ಎಂದು ವಿಧಾನಸಭೆಯಲ್ಲಿ ಸರಕಾರಕ್ಕೆ ಆರ್.ಅಶೋಕ್ ಮಾರ್ಗದರ್ಶನ ನೀಡಿದ್ದರು. ಆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಜರಂಗದಳ ಮುಖಂಡ ಪುನೀತ್ ಅತ್ತಾವರ ಫೇಸ್ ಬುಕ್ ಪೋಸ್ಟ್ ಮಾಡಿದ್ದು,ನೀವು ”ಅಡ್ಜಸ್ಟ್ ಮೆಂಟ್ ಅಶೋಕ್” ಎಂದು ಹೆಸರು ಬದಲಾಯಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸಂಘಪರಿವಾರದ ಹಲವು ಕಾರ್ಯಕರ್ತರು ಕೂಡ ಆಕ್ರೋಶ ಹೊರ ಹಾಕಿದ್ದಾರೆ.

2009 ಜನವರಿ 24ರಂದು, ಶ್ರೀರಾಮಸೇನೆ ಕಾರ್ಯಕರ್ತರು ಮಂಗಳೂರಿನ ಪಬ್‌ನಲ್ಲಿ ಯುವಕ ಯುವತಿಯರ ಗುಂಪಿನ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿದ್ದ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!