ಬ್ರಹ್ಮಾವರ: ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ
ಬ್ರಹ್ಮಾವರ ಫೆ.21(ಉಡುಪಿ ಟೈಮ್ಸ್ ವರದಿ): ಸಾಲ ತೀರಿಸಲಾಗದೆ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಪೆಜಮಂಗೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುರೇಶ್ ಆತ್ಮಹತ್ಯೆ ಮಾಡಿಕೊಂಡವರು. ಚಕ್ಕುಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಮಧ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಇವರು ಸುಮಾರು 8 ತಿಂಗಳ ಹಿಂದೆ ಮನೆ ಕಟ್ಟುವ ಸಲುವಾಗಿ ಸಂಘ ಹಾಗೂ ಸೋಸೈಟಿಯಲ್ಲಿ ಸಾಲ ಮಾಡಿಕೊಂಡಿದ್ದರು. ಅವರು ಮನೆಯ ಸಾಲದ ಕಾರಣದಿಂದಲೂ ಅಥವಾ ಇನ್ನಾವುದೋ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.20 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.