ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳಿಗೆ ಮೇಕ್-ಎ-ವಿಶ್ ಫೌಂಡೇಶನ್ನ ಉಡುಗೊರೆ
ಮಣಿಪಾಲ ಫೆ.21(ಉಡುಪಿ ಟೈಮ್ಸ್ ವರದಿ): ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಕ್-ಎ-ವಿಶ್ ಫೌಂಡೇಶನ್ ವತಿಯಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 25 ಮಕ್ಕಳಿಗೆ ಸುಮಾರು 7 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ ಪದ್ಮರಾಜ್ ಹೆಗ್ಡೆ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಅವರು 25 ಅರ್ಹ ಫಲಾನುಭವಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಉಡುಗೊರೆಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮೇಕ್-ಎ-ವಿಶ್ ಫೌಂಡೇಶನ್ನ ಶ್ರೀ ಎ ಬಿ ಬೋಸ್ಕೋ ಅವರು ಮಾತನಾಡಿ ಪ್ರತಿಷ್ಠಾನದ ಧ್ಯೇಯೋದ್ದೇಶಗಳು ಮತ್ತು ಅದರ ಪ್ರಭಾವಶಾಲಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ರಕ್ತಶಾಸ್ರ ಮತ್ತು ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಭಟ್ ಮತ್ತು ಅವರ ಸಹೋದ್ಯೋಗಿಗಳು ಉಪಸ್ಥಿತರಿದ್ದರು.