ಕೋಟ: ಕೋಳಿ ಅಂಕಕ್ಕೆ ದಾಳಿ-ಐವರು ವಶ

ಕೋಟ ಫೆ.22(ಉಡುಪಿ ಟೈಮ್ಸ್ ವರದಿ) : ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ, ಕೋಳಿ ಅಂಕ ಆಡುತ್ತಿದ್ದ ಗುಂಡು, ಕರುಣಾಕರ, ಹರ್ಷ, ರಾಜು, ರಮೇಶ್ ಎಂಬ ಐವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 1000 ರೂ. ನಗದನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!