ಕಾರ್ಕಳ: ಬೈಕ್ ಸ್ಕಿಡ್ ಆಗಿ ಕಾಲೇಜು ವಿದ್ಯಾರ್ಥಿ ಮೃತ್ಯು
ಕಾರ್ಕಳ ಫೆ.23(ಉಡುಪಿ ಟೈಮ್ಸ್ ವರದಿ): ಸಾಣೂರು ಗ್ರಾಮದ ಪರ್ಪಲೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಇಂಜಿನಿಯರಿಂಗ್ ವಿದ್ಯಾರ್ಥಿ ಆಕಾಶ್ ಕಾಂಚನ್(18) ಎಂದು ಗುರುತಿಸಲಾಗಿದೆ. ಕಾರ್ಕಳದ ಸಾಣೂರು ಗ್ರಾಮದ ಪರ್ಪಲೆ ಎಂಬಲ್ಲಿ ಕಾರ್ಕಳ ಕಡೆಯಿಂದ ನಿಟ್ಟೆ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರ ಆದೀಶ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರು. ಇದೇ ವೇಳೆ ಮತ್ತೊಂದು ಬೈಕ್ನಲ್ಲಿ ಬಂದ ಸವಾರ ಆಕಾಶ್ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಸ್ಕಿಡ್ ಆಗಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಆಕಾಶ್ ರವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಹಾಗೂ ಅದೀಶ್ ರವರನ್ನು ಹೊರರೋಗಿಯಾಗಿ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.