ಫೆ.27ರಂದು(ನಾಳೆ) ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಉದ್ಘಾಟನೆ

ಉಡುಪಿ, ಫೆ.26 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ “ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್” ಸಂತೆಕಟ್ಟೆಯ ಗ್ರೀನ್ ಎಕ್ಸರ್ ಓಪನ್ ಗಾರ್ಡನ್ ನಲ್ಲಿ ಫೆ.27ರಂದು (ನಾಳೆ) ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ.

ಈ ನೂತನ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಟ್ಠಲದಾಸ ಸ್ವಾಮೀಜಿ ಹಾಗೂ ವಂ.ಫರ್ಡಿನೆಂಡ್ ಗೋನ್ಸಾಲ್ವಿಸ್ ಆಶಿರ್ವಚನ ನೀಡಲಿದ್ದಾರೆ. ಅಸೋಸಿಯೇಷನ್ ಅಧ್ಯಕ್ಷ ನವೀನ್ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಫೆಡರಲ್ ಆಫ್ ಕರ್ನಾಟಕ ಕೇಟರರ್ಸ್‌ನ ಅಧ್ಯಕ್ಷ ಜಿ.ಕೆ ಶೆಟ್ಟಿ, ದ.ಕ ಜಿಲ್ಲಾ ಕ್ಯಾಟರಿಂಗ್ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!