ಮಡಿಕೇರಿ: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
ಮಡಿಕೇರಿ ಫೆ.26 : ಕುಶಾಲನಗರದ ಕಣಿವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ನಡೆದಿದೆ.
ಮೈಸೂರು ಮೂಲದ ಹೃತ್ವಿಕ್ (16) ನೀರುಪಾಲಾದ ವಿದ್ಯಾರ್ಥಿ. ಕುಶಾಲನಗರದ ತನ್ನ ಸ್ನೇಹಿತನ ಮನೆಗೆ ಬಂದಿದ್ದ ಹೃತ್ವಿಕ್ ಸ್ನೇಹಿತರ ಜೊತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿದ್ದು, ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.