ಸ್ಪೀಕರ್ ಬಗ್ಗೆ ಅದಮಾರು ಶ್ರೀಯಿಂದ ಏಕವಚನದಲ್ಲಿ ನಿಂದನೆ; ಖಂಡನೆ

ಉಡುಪಿ ಫೆ.27 : ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಾಶಾಭಿಷೇಕದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿ ವಿಶ್ವಪ್ರೀಯ ತೀರ್ಥರು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರನ್ನು ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ದೇವಸ್ಥಾನದಲ್ಲಿ ಫೆ. 22ರಿಂದ 28ರವರೆಗೆ ನಡೆಯುತ್ತಿರುವ ಬ್ರಹ್ಮಕಲಾಶಾಭಿಷೇಕದ ಅಂಗವಾಗಿ ಫೆ. 26ರಂದು ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ, ಸ್ಪೀಕರ್ ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಸ್ವಾಮೀಜಿಯ ಈ ನಡೆಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಹಾಗೂ ವಿಧಾನ ಸಭಾಧ್ಯಕ್ಷರನ್ನು ಏಕ ವಚನದಲ್ಲಿ ಸಂಬೋಧಿಸಿ ಹಿರಿಯ ಸ್ವಾಮೀಜಿಗಳು ಈ ರೀತಿ ಮಾತಾಡಿದ್ದು ಖಂಡನಾರ್ಹ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಮತನಾಡಿದ ಸ್ವಾಮೀಜಿ ಅವರು, ಕನ್ನಡ ಹೋರಾಟಗಾರರು ಕನ್ನಡ ಕನ್ನಡ ಎಂದು ಹೊರಳಾಡಿಕೊಳ್ತಾರೆ. ಅವರ ಮಕ್ಕಳು ಆಂಗ್ಲ ಶಾಲೆಯಲ್ಲಿ ಓದುತ್ತಿದ್ದಾರೆ. ಇವರು ಹಿಂದಿ ಬೋರ್ಡ್ ಬಗ್ಗೆ ಗಲಾಟೆ ಮಾಡ್ತಾರೆ. ಅಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ನಡೆಯುವಾಗ ಒಬ್ಬ ಅಧ್ಯಕ್ಷ ಮೇಲ್ಗಡೆ ಕೂತಿರ್ತಾನೆ. ಅವನ ಕನ್ನಡ ಕೇಳಿದ್ದೀರಾ? ಕೇಳಿಲ್ಲಾ ಅಂದ್ರೆ ಸರಿಯಾಗಿ ಕೇಳಿಸಿಕೊಳ್ಳಿ. ಲ ಕಾರ ಳ ಕಾರಗಳ ವ್ಯತ್ಯಾಸ ಇಲ್ಲದ ರೀತಿ ಕನ್ನಡ ಭಾಷೆ ಬರ್ತಾ ಉಂಟು. ಆದರೆ ಕೆಲವರು ಸುಮ್ಮನೆ ಕನ್ನಡ ಕನ್ನಡ ಅಂತ ಗಲಾಟೆ ಮಾಡ್ತಾರೆ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ರಾಜ್ಯ ಯುವ ಕಾಂಗ್ರೆಸ್ಸಿನ ಮಾಜಿ ಕಾರ್ಯದರ್ಶಿ ಕಾಂಗ್ರೆಸ್ ನ ಹಿರಿಯ ಮುಖಂಡ ಬನ್ನಂಜೆ. ಹಾಗೂ ಗಣೇಶ್ ರಾಜ್ ಸರಳೇಬೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭಾಧ್ಯಕ್ಷರನ್ನು ಏಕ ವಚನದಲ್ಲಿ ಸಂಬೋಧಿಸಿ ಹಿರಿಯ ಸ್ವಾಮೀಜಿಗಳು ಈ ರೀತಿ ಮಾತಾಡಿದ್ದು ಖಂಡನಾರ್ಹ ಎಂದು ಹಾಗೂ ಸುಸಂಸ್ಕೃತರೇಣಿಸಿದ ಶ್ರೀಗಳು ಇಂತಹ ಕೆಟ್ಟ ಪದಗಳಿಂದ ವರ್ಣಿಸಿರುವುದು, ನಿಂದಿಸುವುದು ಸರಿಯಾದ ಮಾರ್ಗವಲ್ಲ ಅವರ ಬಾಯಲ್ಲಿ ಇಂತಹ ಪದ ನಿರೀಕ್ಷಿಸಿರಲಿಲ್ಲ ಎಂದು ಖೇದ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!