ಹಿರಿಯಡ್ಕ : ವ್ಯಕ್ತಿ ನಾಪತ್ತೆ
ಹಿರಿಯಡ್ಕ ಫೆ.28(ಉಡುಪಿ ಟೈಮ್ಸ್ ವರದಿ): ಬೊಮ್ಮರಬೆಟ್ಟು ಗ್ರಾಮದ ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳೀಯ ನಿವಾಸಿ ವಾಸು ಸೇರಿಗಾರ (57) ನಾಪತ್ತೆಯಾಗಿರುವವರು. ಕೂಲಿಕೆಲಸ ಮಾಡಿಕೊಂಡಿದ್ದ ಇವರು ಫೆ.22 ರಂದು ಬೆಳಿಗ್ಗೆ ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಾಪತ್ತೆಯಾಗಿರುವ ವಾಸು ಸೇರಿಗಾರ ಅವರ ತಮ್ಮ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.