ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಉಡುಪಿ ಫೆ.28(ಉಡುಪಿ ಟೈಮ್ಸ್ ವರದಿ): ಉಡುಪಿಯ ಮೂಡನಿಡಂಬೂರು ಗ್ರಾಮದಲ್ಲಿರುವ ಫೈನಾನ್ಸ್ವೊಂದರ ಕಚೇರಿಯ ಹಿಂಬದಿಯ ಖಾಲಿ ಜಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಂದಾಜು 40-45 ವರ್ಷದ ವ್ಯಕ್ತಿಯ ಮೃತದೇಹ ಇದಾಗಿದ್ದು, ಈ ವ್ಯಕ್ತಿ 3-4 ದಿನಗಳ ಹಿಂದೆ ಯಾವುದೋ ಕಾರಣದಿಂದ ನೇಣು ಬಿಗಿದು ಆತ್ಮಾಹತ್ಯೆ ಮಾಡಿಕೊಂಡಿರಬಹುದು ಎಂಬುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.