ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇನ್ನೂ 40 ದಿನ ಇರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ : ಡಾ.ಕೆ. ಸುಧಾಕರ್

ಬೆಂಗಳೂರು ಎ.26 : ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿದೆ. ಈಗಾಗಲೇ ಹೆಚ್ಚಳವಾಗುತ್ತಿರುವ ಕೋವಿಡ್ ನಿಂದ ಜನರು ತತ್ತರಿಸಿಹೋಗಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆ  ಇನ್ನೂ 40 ದಿನ ಇರಲಿದೆ ಎಂದು ತಜ್ಞರು ಹೇಳಿರೋದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು,  ಕೊರೋನಾ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಜನ ಸೋಂಕಿತರಾಗಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಇನ್ನೂ 40 ದಿನ ಇರಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು ಅಲ್ಲಿಯವರೆಗೆ ಮನೆಯಲ್ಲೇ ಇರೋದು ಸೂಕ್ತ ಎಂದು ಹೇಳಿದ್ದಾರೆ. ಇದೇ ವೇಳೆ ಕೊರೋನಾ ರೋಗದ ಲಕ್ಷಣ ಇಲ್ಲದಿದ್ರೂ ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ಬರೋರ ಸಂಖ್ಯೆ ಹೆಚ್ಚಾಗ್ತಿದೆ. ಇದರಿಂದ ಆರೋಗ್ಯ ವ್ಯವಸ್ಥೆ ಮೇಲೆ ಹೆಚ್ಚಿನ ಹೊರೆ ಆಗ್ತಿದೆ. ಆದ್ದರಿಂದ ರೋಗಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ  ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!