ಬೆಂಗಳೂರು : ಮಾ.4-5- ರಾಜ್ಯ ಮಟ್ಟದ ಗುತ್ತಿಗೆದಾರರ ಸಮ್ಮೇಳನ

ಬೆಂಗಳೂರು ಮಾ.1(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಇದರ ವತಿಯಿಂದ ರಾಜ್ಯ ಗುತ್ತಿಗೆದಾರರ ರಾಜ್ಯಮಟ್ಟದ ಸಮ್ಮೇಳನ ಮಾ. 4 ಮತ್ತು 5 ರಂದು ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಅರಮನೆ ಆವರಣದ ಗಾಯತ್ರಿ ಗ್ರಾಂಡ್ ನಲ್ಲಿ ನಡೆಯಲಿದೆ.

ಈ ರಾಜ್ಯ ಮಟ್ಟದ ಸಮ್ಮೇಳನವನ್ನು ಮಾ.4 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಸತಿ ವಾಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಎಸ್ ಬೋಸರಾಜ್ ಅವರು ಭಾಗವಹಿಸಲಿದ್ದಾರೆ  ಎಂದು ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!