ಮೊನ್ನೆ ಪಾಕ್ ಪರ ಘೋಷಣೆ, ಇಂದು ಸ್ಫೋಟ- ಗೃಹ ಸಚಿವರ ರಾಜೀನಾಮೆಗೆ ಯತ್ನಾಳ್ ಆಗ್ರಹ
ಬೆಂಗಳೂರು ಮಾ.1 : ಮೊನ್ನೆಯಷ್ಟೇ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದ ಬೆನ್ನಲ್ಲೇ ಇಂದು ರಾಮೇಶ್ವರಂನ ಕೆಫೆಯಲ್ಲಿ ಬ್ಲಾಸ್ಟ್ ನಡೆದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡುವಂತೆ ಇಡೀ ಕರ್ನಾಟಕ ಆಗ್ರಹಿಸುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೂ ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‍ನಿಂದ ಸ್ಫೋಟ ಸಂಭವಿಸಿದೆ. ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿತ್ತು. ಹೀಗಾಗಿ ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಕರ್ನಾಟಕ ಆಗ್ರಹಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.