ಮಲ್ಪೆ/ಕಾರ್ಕಳ: ಅನಾರೋಗ್ಯದ ಕಾರಣ – ಇಬ್ಬರು ನೇಣಿಗೆ ಶರಣು
ಮಲ್ಪೆ/ಕಾರ್ಕಳ ಮಾ.4(ಉಡುಪಿ ಟೈಮ್ಸ್ ವರದಿ) : ತಮ್ಮ ಅನಾರೋಗ್ಯದ ಕಾರಣ ಮನನೊಂದು ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಘಟನೆ ಮಲ್ಪೆ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಉಪೇಂದ್ರ(49) ಎಂಬವರು ತಮಗಿದ್ದ ಅನಾರೋಗ್ಯದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮತ್ತೊಂದೆಡೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಹೇಮತಲಾ (45) ಎಂಬವರು ತಮಗಿದ್ದ ಅನಾರೋಗ್ಯದಿಂದ ಮನನೊಂದು ಮಾ.2 ರ ಬೆಳಿಗ್ಗೆಯಿಂದ ಮಧ್ಯಾಹ್ನದ ನಡುವಿನ ಅವಧಿಯಲ್ಲಿ ಸರಕಾರಿ ಹಾಡಿಯಲ್ಲಿನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಎರಡೂ ಘಟನೆಗೆ ಸಂಬಂಧಿಸಿ ಮಲ್ಪೆ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ