ಉಡುಪಿ: ಜಿಲ್ಲೆಯಲ್ಲಿ ಇಂದು (ಎ.26) 412 ಕೋವಿಡ್ ಪ್ರಕರಣಗಳು ಪತ್ತೆ

ಉಡುಪಿ, ಎ.25(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ  ದಿನಹೋದಂತೆ ಕೋವಿಡ್ ಪಾಸಿಟಿವ್ ಪ್ರಕರಣ ಗಳ ಸಂಖ್ಯೆ  ಹೆಚ್ಚಾಗುತ್ತಿದೆ.
 ಇಂದು ಜಿಲ್ಲೆಯಲ್ಲಿ  412 ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿದೆ. 

ಈ ಪೈಕಿ ಉಡುಪಿಯಲ್ಲಿ 195, ಕುಂದಾಪುರ ದಲ್ಲಿ 154, ಕಾರ್ಕಳ ದಲ್ಲಿ 61 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೋವಿಡ್ ಸೋಂಕು ಇರುವುದು  ದೃಢ ಪಟ್ಟಿದೆ.  ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 1687ಕ್ಕೆ ಏರಿಕೆಯಾಗಿದೆ.ಎ.24 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು  4,91,127 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 29,173 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.

ಈವರೆಗೆ ಜಿಲ್ಲೆಯಲ್ಲಿ 27,292 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ  ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!