ಬೈಂದೂರು: ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು- ಮೀನುಗಾರ ಮೃತ್ಯು

ಬೈಂದೂರು ಮಾ.6(ಉಡುಪಿ ಟೈಮ್ಸ್ ವರದಿ): ಬೈಂದೂರು ಠಾಣಾ ವ್ಯಾಪ್ತಿಯ ಸುಮನಾ ಹೊಳೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.

ಠಾಣಾ ವ್ಯಾಪ್ತಿಯ ನಿವಾಸಿ ರಾಮ (57) ಮೃತಪಟ್ಟವರು. ಇವರು ನಿನ್ನೆ ಮಧ್ಯಾಹ್ನದ ವೇಳೆ ತಮ್ಮ ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಹೊಳೆಗೆ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಮಗ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!