ಕುಂದಾಪುರ: ಅನಾರೋಗ್ಯದ ಕಾರಣ- ಮಹಿಳೆ ಆತ್ಮಹತ್ಯೆ
ಕುಂದಾಪುರ ಮಾ.3(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಠಾಣಾ ವ್ಯಾಪ್ತಿಯ ನಿವಾಸಿ ಅಶ್ವಿನಿ (32) ಮೃತಪಟ್ಟವರು. ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಅ.4 ರ ರಾತ್ರಿಯಿಂದ ಮಾ.5 ರ ಬೆಳಗ್ಗಿನ ಅವಧಿಯಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಂಗಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.