ಕಾರ್ಕಳ: ಅನಾರೋಗ್ಯದ ಕಾರಣ: ವ್ಯಕ್ತಿ ಆತ್ಮಹತ್ಯೆ

ಕಾರ್ಕಳ ಮಾ.11(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ರಾಜೀವ  ನಗರ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸುನೀಲ್ (39 ) ಆತ್ಮಹತ್ಯೆ ಮಾಡಿಕೊಂಡವರು. ಇವರು ಇಂದು ಬೆಂಗಳೂರಿನಿಂದ ಊರಿಗೆ ಬಂದಿದ್ದು. ತಮಗಿದ್ದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದರು. ಆ ಬಳಿಕ ಮನೆಗೆ ಹೋದವರು ಮಧ್ಯಾಹ್ನದ ವೇಳೆ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!