ಶಂಕರನಾರಾಯಣ: ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತ್ಯು
ಶಂಕರನಾರಾಯಣ ಮಾ.12(ಉಡುಪಿ ಟೈಮ್ಸ್ ವರದಿ): ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ಒಳಗುಡ್ಡೆ ತೊಂಬತ್ತು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಕೃಷ್ಣ ಎಂಬವರ ಮಗಳು 10 ನೇ ತರಗತಿ ವಿದ್ಯಾರ್ಥಿನಿ ಅಕ್ಷಯ (16) ಮೃತಪಟ್ಟರು. ಅಮಾಸೆಬೈಲು ಪ್ರೌಢ ಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಕ್ಷಯ ಎಂದಿನಂತೆ ನಿನ್ನೆ ಸಂಜೆ ಶಾಲೆ ಮುಗಿಸಿ ವಾಪಾಸ್ಸು ಮನೆಗೆ ಬಂದು ಮನೆಯ ಪಕ್ಕದಲ್ಲಿರುವ ಬಾವಿಯ ನೀರನ್ನು ಕೃಷಿ ಅಡಿಕೆ ತೋಟಕ್ಕೆ ಬೀಡಲು ಬಾವಿಯ ಹತ್ತಿರ ಹೋದಾಗ ಅಕಸ್ಮಾತಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ತಂದೆ ನೀಡಿದ ಮಾಹಿತಿಯಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.