ಬೈಂದೂರು: ಸಮುದ್ರದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಬೈಂದೂರು ಮಾ.12(ಉಡುಪಿ ಟೈಮ್ಸ್ ವರದಿ): ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ನೇಜಿ ಮೊಹಮ್ಮದ್ ರಿಜ್ವಾನ್ (33) ಮೃತಪಟ್ಟರು. ಇವರು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಅವಧಿಯಲ್ಲಿ ಬೈಂದೂರಿನ ಶಿರೂರು ಗ್ರಾಮದ ಶಿರೂರು ಅಳಿವೆಗದ್ದೆ ಬಂದರಿನ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ ಮಾಹಿತಿಯಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.