3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಎಸ್‌: ಮಂಡ್ಯ ಸುಮಲತಾ ಪಕ್ಷೇತರ ಸ್ಪರ್ಧೆ ಫಿಕ್ಸ್?!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಪಕ್ಷವು ತನ್ನ ಪಾಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ನಿರೀಕ್ಷೆಯಂತೆಯೇ ಮಂಡ್ಯದಿಂದ ಸ್ವತಃ ಮಾಜಿ ಸಿಎಂ, ಜೆಡಿಎಸ್‌ ರಾಜಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರು ವ ಹಾಸನದಿಂದ ಎಚ್.ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಘೋಷಿಸಿದೆ. ಅಲ್ಲದೆ, ಕೋಲಾರದಿಂದ ಮಲ್ಲೇಶ್‌ ಬಾಬು ಅವರಿಗೆ ಜೆಡಿಎಸ್ ಟಿಕೆಟ್‌ ನೀಡಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಫಲದಿಂದಾಗಿ ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯ ಜೆಡಿಎಸ್ ಪಾಲಾಗಿದೆ. ಹೀಗಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಗೆ ಭಾರೀ ನಿರಾಸೆಯಾಗಿದ್ದು, ಅವರು ಕಳೆದ ಚುನಾವಣೆಯಂತೆ ಈ ಸಲವೂ ಪಕ್ಷೇತರವಾಗಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ತುರ್ತು ಸಭೆ ಕರೆದಿದ್ದಾರೆ. ಬೆಂಬಲಿಗರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಪ್ರಕಟಿಸಬಹುದು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!