ಇಂದು ರಾತ್ರಿಯಿಂದ ಲಾಕ್ ಡೌನ್: ಸರದಿ ಸಾಲಿನಲ್ಲಿ ಸಾಮಗ್ರಿಗಳನ್ನು ಖರೀದಿಸಿದ ಜನತೆ
ಉಡುಪಿ ಎ.27 (ಉಡುಪಿ ಟೈಮ್ಸ್ ವರದಿ): ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಸೆಕ್ಷನ್ 144 ರ ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಅದರಂತೆ ಇಂದು ರಾತ್ರಿಯಿಂದ ರಾಜ್ಯದಲ್ಲಿ ಅನೇಕ ಸೇವೆಗಳಿಗೆ ನಿಷೇಧ ಹೇರಿದ್ದು ರಾಜ್ಯ ಸ್ತಬ್ದವಾಗಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕೂಡಾ ನಾಳೆಯ ಲಾಕ್ ಡೌನ್ ಗೆ ಸಿದ್ದತೆ ನಡೆಸಲಾಗುತ್ತಿದೆ.
ಇನ್ನು 14 ದಿನಗಳ ಕಾಲ ಜಿಲ್ಲೆ ಸ್ತಬ್ದವಾಗಿರಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಲ್ಲಿ ಹೊರ ರಾಜ್ಯಕ್ಕೆ ತೆರಳಲಿರುವ ಸಾರಿಗೆ ಬಸ್ ಗಳಿಗೆ ನಿರ್ಬಂಧ ಹೇರಲಾಗಿದೆ. ಆದ್ದರಿಂದ ಹೊರ ಜಿಲ್ಲೆಯ ಜನರು ತಮ್ಮ ಊರಿಗೆ ತೆರಳಲು ಇಂದೇ ಹೊರಟಿದ್ದಾರೆ. ಇಂದು ಉಡುಪಿಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಹೊರ ರಾಜ್ಯಗಳಿಗೆ ತೆರಳುವ ಅನೇಕ ಪ್ರಯಾಣಿಕರು ಬಸ್ಗಾಗಿ ಕಾದು ಕುಳಿತಿರುವ ದೃಶ್ಯ ಕಂಡು ಬಂದಿದೆ. ಇನ್ನು ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಪಡಿಸಿ ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಅವಕಾಶ ನೀಡಿರುವುದರಿಂದ ಅನೇಕ ಕಡೆಗಳಲ್ಲಿ ಇಂದೇ ಅಗತ್ಯ ವಸ್ತುಗಳ ಖರೀದಿಗೆ ಜನ ಸರತಿ ಸಾಲಿನಲ್ಲಿ ಬಂದು ವಸ್ತುಗಳನ್ನು ಖರೀದಿ ಮಾಡುತ್ತಿರುವುದು ಕಂಡು ಬಂದಿತ್ತು.
ಇನ್ನು ರಾಜ್ಯದಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಮಾತ್ರ ನಿತ್ಯದ ಚಟುವಟಿಕೆಗೆ ಅವಕಾಶ ನೀಡಲಾಗಿದೆ. 10 ಗಂಟೆ ಬಳಿಕ ತುರ್ತು ಸೇವೆಗಳಿಗೆ ಹೊರತು ಪಡಿಸಿ ಉಳಿದ ಚಟುವಟಿಕೆಗಳಿಗೆ ಅವಕಾಶ ನಿರ್ಬಂಧಿಸಲಾಗಿದೆ.